Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:7 - ಕನ್ನಡ ಸತ್ಯವೇದವು J.V. (BSI)

7 ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:7
22 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ದಣಿಗಿಂತ ಆಳು ದೊಡ್ಡವನಲ್ಲ, ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು - ಆ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿರುವದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು ಅಂದನು.


ಅವನು ಅವರಿಗೆ - ನಾನಾಗಲಿ ನನ್ನ ಮಗನಾಗಲಿ ನಿಮ್ಮನ್ನು ಆಳುವದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.


ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.


ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇವಿುಸು ಎಂದನು. ಆಗ ಸಮುವೇಲನು ಇಸ್ರಾಯೇಲ್ಯರಿಗೆ - ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ ಎಂದು ಅಪ್ಪಣೆಕೊಟ್ಟನು.


ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು