Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:8 - ಕನ್ನಡ ಸತ್ಯವೇದವು J.V. (BSI)

8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿದೆ. ಅಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:8
22 ತಿಳಿವುಗಳ ಹೋಲಿಕೆ  

ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ


ಆದದರಿಂದ ಯೆಹೋವನ ಕೋಪವು ಇಸ್ರಾಯೇಲ್ಯರ ಮೇಲೆ ಉರಿಯಹತ್ತಿತು; ಆತನು - ಈ ಜನರ ಪಿತೃಗಳಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನ ಆಜ್ಞೆಯನ್ನು ಉಲ್ಲಂಘಿಸುವವರೇ.


ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.


ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.


ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು