Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:12 - ಕನ್ನಡ ಸತ್ಯವೇದವು J.V. (BSI)

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:12
11 ತಿಳಿವುಗಳ ಹೋಲಿಕೆ  

ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.


ಅದಕ್ಕೆ ಸಮುವೇಲನು - ನಾನು ಹೋಗುವದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ ಅನ್ನಲು ಆತನು - ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕೆ ಕರೆ.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಯಾಜಕನಾದ ಚಾದೋಕನನ್ನೂ ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.


ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.


ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ನಿನ್ನ ತಂದೆಯು ನನ್ನನ್ನು ಕುರಿತು ವಿಚಾರಮಾಡಿದರೆ ನೀನು - ದಾವೀದನು ತನ್ನ ಊರಾದ ಬೇತ್ಲೆಹೇವಿುಗೆ ಹೋಗಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕಯಜ್ಞ ಮಾಡುತ್ತಾರಂತೆ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು