Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:2 - ಕನ್ನಡ ಸತ್ಯವೇದವು J.V. (BSI)

2 ಇವನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿ ಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಸೌಲನು ಸುಂದರನಾದ ಯುವಕನಾಗಿದ್ದನು. ಸೌಲನಿಗಿಂತ ಸುಂದರರು ಅಲ್ಲಿರಲಿಲ್ಲ. ಸೌಲನು ಇತರ ಇಸ್ರೇಲ್ ಗಂಡಸರಿಗಿಂತ ಎತ್ತರವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನಿಗೆ ಒಳ್ಳೆಯ ಪ್ರಾಯಸ್ಥನಾದ ಸೌಲನೆಂಬ ಹೆಸರುಳ್ಳ ಒಬ್ಬ ಒಳ್ಳೆಯ ಮಗನಿದ್ದನು. ಇಸ್ರಾಯೇಲರಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನಾದರೂ ಇರಲಿಲ್ಲ. ಅವನ ಭುಜವು ಜನರ ಮಧ್ಯೆ ಕಾಣುವಷ್ಟು ಎತ್ತರವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:2
10 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.


ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ಉಭಯರ ಮಧ್ಯದಲ್ಲಿ ಒಂದು ತಗ್ಗು ಇತ್ತು. ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.


ಒಂದು ದಿವಸ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದದರಿಂದ ಅವನು ತನ್ನ ಮಗನಾದ ಸೌಲನಿಗೆ - ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವದಕ್ಕೆ ಹೋಗು ಎಂದು ಹೇಳಿದನು.


ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.


ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಇವರನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು