Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:22 - ಕನ್ನಡ ಸತ್ಯವೇದವು J.V. (BSI)

22 ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು. ಬಲಿಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಸಮುವೇಲನು ಸೌಲನನ್ನು ಮತ್ತು ಅವನ ಸೇವಕನನ್ನು ಊಟದ ಸ್ಥಳಕ್ಕೆ ಕರೆದುಕೊಂಡು ಹೋದನು. ಒಟ್ಟಿಗೆ ಊಟ ಮಾಡಲು ಮತ್ತು ಯಜ್ಞವಸ್ತುಗಳನ್ನು ಹಂಚಿಕೊಳ್ಳಲು ಸುಮಾರು ಮೂವತ್ತು ಜನರನ್ನು ಆಹ್ವಾನಿಸಲಾಗಿತ್ತು. ಸಮುವೇಲನು ಸೌಲನಿಗೆ ಮತ್ತು ಅವನ ಸೇವಕನಿಗೆ ಊಟದ ಮೇಜಿನಲ್ಲಿ ಅತೀ ಮುಖ್ಯವಾದ ಸ್ಥಳವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಸಮುಯೇಲನು ಸೌಲನನ್ನೂ, ಅವನ ಸೇವಕನನ್ನೂ ಕರೆತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳಕ್ಕೆ ಕರಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:22
4 ತಿಳಿವುಗಳ ಹೋಲಿಕೆ  

ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕೂತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ ಅನ್ನುವನು. ಆಗ ನಿನ್ನ ಸಂಗಡ ಕೂತಿರುವವರೆಲ್ಲರ ಮುಂದೆ ನಿನಗೆ ಮಾನ ಬರುವದು.


ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಐಗುಪ್ತ್ಯರು ಇಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವದಿಲ್ಲ; ಅದು ಅವರಿಗೆ ಅಸಹ್ಯ.


ಅದಕ್ಕೆ ಸೌಲನು - ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ ಎಂದನು.


ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು