1 ಸಮುಯೇಲ 9:24 - ಕನ್ನಡ ಸತ್ಯವೇದವು J.V. (BSI)24 ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟು ಅವನಿಗೆ - ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಸಮುವೇಲನು ಸೌಲನಿಗೆ, “ಇಗೋ, ಇದು ನಿನಗಾಗಿ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಬಲಿಭೋಜನಕ್ಕೆ ಕರೆದಾಗಿನಿಂದ ಇದು ನಿನಗಾಗಿಯೇ ಪ್ರತ್ಯೇಕವಾಗಿ ಇಡಲಾಗಿತ್ತು,” ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಡಿಗೆಯವನು ತೊಡೆಯ ಮಾಂಸವನ್ನು ತೆಗೆದುಕೊಂಡು ಬಂದು ಸೌಲನ ಎದುರಿಗೆ ಮೇಜಿನ ಮೇಲಿಟ್ಟನು. ಸಮುವೇಲನು, “ನಾನು ನಿನಗಾಗಿ ಈ ಮಾಂಸವನ್ನು ಪ್ರತ್ಯೇಕವಾಗಿರಿಸಿದ್ದೇನೆ. ಇದನ್ನು ತಿನ್ನು, ಏಕೆಂದರೆ ಇದನ್ನು ಈ ವಿಶೇಷವಾದ ಸಂದರ್ಭದಲ್ಲಿ ನಿನಗೆ ಕೊಡುವುದಕ್ಕಾಗಿಯೇ ಪ್ರತ್ಯೇಕಿಸಲಾಗಿತ್ತು” ಎಂದು ಹೇಳಿದನು. ಆದ್ದರಿಂದ ಸೌಲನು ಸಮುವೇಲನ ಜೊತೆಯಲ್ಲಿ ಆ ದಿನ ಊಟಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು. ಅಧ್ಯಾಯವನ್ನು ನೋಡಿ |