Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:3 - ಕನ್ನಡ ಸತ್ಯವೇದವು J.V. (BSI)

3 ಒಂದು ದಿವಸ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದದರಿಂದ ಅವನು ತನ್ನ ಮಗನಾದ ಸೌಲನಿಗೆ - ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವದಕ್ಕೆ ಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಂದು ದಿನ ಕೀಷನ ಕತ್ತೆಗಳು ಕಳೆದುಹೋದವು. ಆದ್ದರಿಂದ ಕೀಷನು ಸೌಲನಿಗೆ, “ಸೇವಕನೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದ್ದರಿಂದ ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರೆದುಕೊಂಡು, ಕತ್ತೆಗಳನ್ನು ಹುಡುಕಲು ಹೋಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:3
7 ತಿಳಿವುಗಳ ಹೋಲಿಕೆ  

ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ; ಅವರು ನಿನಗೆ - ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂಬದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ ಎಂದು ಹೇಳುವರು.


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರೀ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರಿನ ಗ್ರಾಮಗಳೆಂದು ಹೆಸರಿದೆ.


ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕೂತುಕೊಳ್ಳುವವರೇ, ಪ್ರಯಾಣಿಕರೇ, ಗಾನ ಮಾಡಿರಿ.


ಇವನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿ ಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತವಾಗಿದ್ದನು.


ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾದೇಶ ಇವುಗಳಲ್ಲಿ ಸಂಚರಿಸಿದರೂ ಅವು ಸಿಕ್ಕಲಿಲ್ಲ; ಶಾಲೀಮ್, ಬೆನ್ಯಾಮೀನ್ ಈ ಪ್ರಾಂತಗಳಲ್ಲಿಯೂ ಸಿಕ್ಕಲಿಲ್ಲ.


ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಮತ್ತು ಇಸ್ರಾಯೇಲ್ಯರ ಶ್ರೇಷ್ಠವಸ್ತುಗಳೆಲ್ಲಾ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೋ ಅಂದನು.


ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ - ನೀವು ಎಲ್ಲಿಗೆ ಹೋಗಿದ್ದಿರಿ ಎಂದು ಕೇಳಲು ಅವನು - ಕತ್ತೆಗಳನ್ನು ಹುಡುಕುವದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು