Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:4 - ಕನ್ನಡ ಸತ್ಯವೇದವು J.V. (BSI)

4 ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾದೇಶ ಇವುಗಳಲ್ಲಿ ಸಂಚರಿಸಿದರೂ ಅವು ಸಿಕ್ಕಲಿಲ್ಲ; ಶಾಲೀಮ್, ಬೆನ್ಯಾಮೀನ್ ಈ ಪ್ರಾಂತಗಳಲ್ಲಿಯೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗು ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನು ಕತ್ತೆಗಳನ್ನು ಹುಡುಕಲು ಆರಂಭಿಸಿದನು. ಸೌಲನು ಮತ್ತು ಅವನ ಸೇವಕನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಹುಡುಕಿದರೂ ಅವರಿಗೆ ಕತ್ತೆಗಳು ಸಿಗಲಿಲ್ಲ. ಆದ್ದರಿಂದ ಅವರು ಶಾಲೀಮ್ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಕ್ಕಲಿಲ್ಲ. ಆದ್ದರಿಂದ ಅವರು ಬೆನ್ಯಾಮೀನನ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಅವನು ಎಫ್ರಾಯೀಮ್ ಬೆಟ್ಟವನ್ನು ಶಾಲಿಷಾ ದೇಶವನ್ನೂ ದಾಟಿಹೋದನು, ಆದರೆ ಅವು ಸಿಕ್ಕಲಿಲ್ಲ. ಶಾಲೀಮ್ ದೇಶವನ್ನು ಹಾದುಹೋದನು, ಅಲ್ಲಿಯೂ ಅವುಗಳು ಕಾಣದೆ ಹೋದವು. ಅವನು ಬೆನ್ಯಾಮೀನನ ದೇಶವನ್ನು ದಾಟಿ, ಅವುಗಳನ್ನು ಕಾಣದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:4
9 ತಿಳಿವುಗಳ ಹೋಲಿಕೆ  

ಒಂದು ದಿವಸ ಬಾಳ್‍ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲತುಂಬಾ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ - ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ ಎಂದು ಹೇಳಿದನು.


ಆರೋನನ ಮಗನಾದ ಎಲ್ಲಾಜಾರನೂ ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಯೋಹಾನನೂ ಸಲೀಮೂರಿನ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು; ಅಲ್ಲಿ ಬಹಳ ನೀರಿತ್ತು; ಜನರು ಬಂದು ಸ್ನಾನಮಾಡಿಸಿಕೊಳ್ಳುತ್ತಾ ಇದ್ದರು;


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬೊಬ್ಬ ಮನುಷ್ಯನಿದ್ದನು.


ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್‍ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,


ಒಂದು ದಿವಸ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದದರಿಂದ ಅವನು ತನ್ನ ಮಗನಾದ ಸೌಲನಿಗೆ - ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವದಕ್ಕೆ ಹೋಗು ಎಂದು ಹೇಳಿದನು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು