2 ಅರಸುಗಳು 1:12 - ಕನ್ನಡ ಸತ್ಯವೇದವು J.V. (BSI)12 ಆಗ ಎಲೀಯನು ಅವನಿಗೆ - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿಯು ಬಂದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಎಲೀಯನು ಅವರಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು. ಅಧ್ಯಾಯವನ್ನು ನೋಡಿ |