2 ಅರಸುಗಳು 1:13 - ಕನ್ನಡ ಸತ್ಯವೇದವು J.V. (BSI)13 ಅರಸನು ಮತ್ತೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಅವನನ್ನು - ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ. ಅಧ್ಯಾಯವನ್ನು ನೋಡಿ |