Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:16 - ಕನ್ನಡ ಸತ್ಯವೇದವು J.V. (BSI)

16 ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರಮಾಡುವದಕ್ಕೆ ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:16
13 ತಿಳಿವುಗಳ ಹೋಲಿಕೆ  

ನಾನು ನನ್ನ ಮನೆಯೊಳಗೆ ಪ್ರವೇಶಿಸುವದಿಲ್ಲ, ಮಂಚವನ್ನು ಹತ್ತುವದಿಲ್ಲ,


ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದಿಳಿದು ಅವನನ್ನು ಎದುರುಗೊಂಡು - ಕ್ಷೇಮವೋ ಎಂದು ಕೇಳಿದನು.


ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.


ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.


ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರಲ್ಲಿ ಯಾವ ಯಾವನು ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯನ್ನು ಪ್ರಶ್ನೆಕೇಳುವದಕ್ಕೆ ಬರುವನೋ ಅವನ ಪಾತಕಕ್ಕೆ ಅಂದರೆ ಅವನ ಲೆಕ್ಕವಿಲ್ಲದ ಬೊಂಬೆಗಳಿಗೆ ತಕ್ಕ ಹಾಗೆ ಯೆಹೋವನಾದ ನಾನು ಅವನಿಗೆ ಉತ್ತರವನ್ನು ಕೊಡುವೆನು;


ಅವನಿಗೆ - ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವದೋ ಇಲ್ಲವೋ ಎಂಬದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು ಎಂದು ಆಜ್ಞಾಪಿಸಿದನು.


ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ - ಹೇಗೂ ನಿನಗೆ ವಾಸಿಯಾಗುವದು ಎಂಬದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿ


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು