2 ಅರಸುಗಳು 1:2 - ಕನ್ನಡ ಸತ್ಯವೇದವು J.V. (BSI)2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಜಾಳಾಂಧರ ಕಿಟಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬದನ್ನು ವಿಚಾರಿಸಿರಿ ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.