2 ಅರಸುಗಳು 1:3 - ಕನ್ನಡ ಸತ್ಯವೇದವು J.V. (BSI)3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ - ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ವೆಬೂಬನನ್ನು ವಿಚಾರಿಸುವದಕ್ಕೆ ಹೋಗುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ? ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.