Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:15 - ಕನ್ನಡ ಸತ್ಯವೇದವು J.V. (BSI)

15 ಅವನು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ - ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸೂ ಯಥಾರ್ಥವಾಗಿರುತ್ತದೋ ಎಂದು ಕೇಳಿದನು. ಅವನು - ಹೌದು ಎಂದು ಉತ್ತರಕೊಟ್ಟನು. ಆಗ ಯೇಹುವು - ಹಾಗಾದರೆ ನಿನ್ನ ಕೈಕೊಡು ಅನ್ನಲು ಅವನು ಕೈಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:15
20 ತಿಳಿವುಗಳ ಹೋಲಿಕೆ  

ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು.


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಯಾಬೇಚಿನಲ್ಲಿ ವಾಸಿಸುವ ಕುಲಕರಣಿ ಕುಟುಂಬದವರಾದ ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲಪುರುಷನಾಗಿರುವ ಹಮತನಿಂದ ಉತ್ಪನ್ನರಾದ ಕೇನ್ಯರು.


ಸಹೋದರರೇ, ನಾನು ನಿಮ್ಮ ಹಾಗೆ ಆದದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯಮಾಡಲಿಲ್ಲ.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಅವನು - ಯಾರಾದರೂ ನನಗೆ ಅರ್ಥ ತಿಳಿಸಿಕೊಟ್ಟ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ - ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕೂತುಕೋ ಎಂಬದಾಗಿ ಫಿಲಿಪ್ಪನನ್ನು ಕೇಳಿಕೊಂಡನು.


ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರನ್ನು - ನೀವು ಯಾರು ಎಂದು ಕೇಳಿದನು. ಅದಕ್ಕೆ ಅವರು - ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ ಎಂದು ಉತ್ತರಕೊಟ್ಟರು.


ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಾಯೇಲ್ಯರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮತಮ್ಮ ರಥಗಳಲ್ಲಿ ಕೂತುಕೊಂಡು ಯೇಹುವನ್ನು ಎದುರುಗೊಳ್ಳುವದಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.


ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಬೆಳಿಗ್ಗೆ ಲಾಬಾನನು ಎದ್ದು ತನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಊರಿಗೆ ಹೊರಟುಹೋದನು.


ಆಗ ಯೇಹುವು ತನ್ನ ಸೇವಕರಿಗೆ - ಅವರನ್ನು ಸಜೀವಿಗಳಾಗಿ ಹಿಡಿಯಿರಿ ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.


ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಡು.


ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು - ಬೆನ್ಹದದನು ನಿನ್ನ ಸಹೋದರನೇ ಹೌದು ಅಂದರು. ಅವನು ಅವರಿಗೆ - ಹೋಗಿ ಬೆನ್ಹದದನನ್ನು ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ತಿಪ್ಪೆಬಾಗಲನ್ನು ಜೀರ್ಣೋದ್ಧಾರಮಾಡಿದವನು ಬೇತ್‍ಹಕ್ಕೆರೆವಿುನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದನು.


ದುಷ್ಟರಿಗೆ ವಿರೋಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರೋಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು