Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:20 - ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಅವನು ದೂತರ ಮುಖಾಂತರವಾಗಿ - ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕೆಂದು ಇಸ್ರಾಯೇಲ್ಯರ ಸಮಸ್ತ ಪ್ರಾಂತಗಳಲ್ಲಿ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ ಅವನು ದೂತರ ಮುಖಾಂತರ, “ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕು,” ಎಂದು ಇಸ್ರಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:20
6 ತಿಳಿವುಗಳ ಹೋಲಿಕೆ  

ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.


ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು.


ಅವರು ಉಪವಾಸವನ್ನು ಪ್ರಕಟಿಸಿ ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.


ಚೀಯೋನಿನಲ್ಲಿ ಕೊಂಬೂದಿರಿ, ಉಪವಾಸದಿನವನ್ನು ಗೊತ್ತುಮಾಡಿರಿ, ಸಂಘವನ್ನು ನೆರೆಯಿಸಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು