Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:26 - ಕನ್ನಡ ಸತ್ಯವೇದವು J.V. (BSI)

26 ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:26
15 ತಿಳಿವುಗಳ ಹೋಲಿಕೆ  

ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆಯು ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.


ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ಬಾಳ್‍ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿ ಕಟ್ಟಿಸಿ ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿ ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳು ಮಾಡಿದರು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಆದದರಿಂದ ನೀವು ಹೀಗೆ ಮಾಡಬೇಕು - ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲಿನ ಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್‍ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.


ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.


ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ದೇವರುಗಳನ್ನು ದಾವೀದನು ಸುಡಿಸಿಬಿಟ್ಟನು.


ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡಿಸಿ ಪುಡಿಪುಡಿಮಾಡಿಸಿ ಇಸ್ರಾಯೇಲ್‍ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಯೆರೂಸಲೇವಿುಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು