Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:3 - ಕನ್ನಡ ಸತ್ಯವೇದವು J.V. (BSI)

3 ಈ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗೋಸ್ಕರ ಯುದ್ಧಮಾಡಿರಿ ಎಂಬದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ, ನಿಮ್ಮ ಯಜಮಾನನ ಕುಟುಂಬದವರ ಪರವಾಗಿ ಯುದ್ಧಮಾಡಿ,” ಎಂಬುದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನಿಮ್ಮ ಯಜಮಾನನ ಪುತ್ರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂರಿಸಿ, ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:3
10 ತಿಳಿವುಗಳ ಹೋಲಿಕೆ  

ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.


ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.


ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಅವುಗಳಲ್ಲಿ - ನಿಮ್ಮ ವಶದಲ್ಲಿ ನಿಮ್ಮ ಯಜಮಾನನ ಮಕ್ಕಳೂ ರಥಾಶ್ವಬಲಗಳೂ ಕೋಟೆಕೊತ್ತಲುಗಳುಳ್ಳ ಪಟ್ಟಣವೂ ಯುದ್ಧಾಯುಧಗಳೂ ಇರುತ್ತವಷ್ಟೆ.


ಅವರು ಬಹಳವಾಗಿ ಭಯಪಟ್ಟು - ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು