2 ಅರಸುಗಳು 10:31 - ಕನ್ನಡ ಸತ್ಯವೇದವು J.V. (BSI)31 ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿ |