2 ಅರಸುಗಳು 11:14 - ಕನ್ನಡ ಸತ್ಯವೇದವು J.V. (BSI)14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು. ಅಧ್ಯಾಯವನ್ನು ನೋಡಿ |
ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ.