Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:4 - ಕನ್ನಡ ಸತ್ಯವೇದವು J.V. (BSI)

4 ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:4
24 ತಿಳಿವುಗಳ ಹೋಲಿಕೆ  

ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟು ಶತಾಧಿಪತಿಗಳು, ಕಾರಿ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು, ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಕಾವಲುದಂಡಿನವರ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು;


ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್‍ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರಕೊಂಡು ಅವನ ಬಳಿಗೆ ಬಂದರು.


ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವದಾಗಿ ಆತನಿಗೆ ಪ್ರಮಾಣಮಾಡಿದರು. ಇದಲ್ಲದೆ ರಾಜಪ್ರಜೆಗಳಿಗೂ ಒಡಂಬಡಿಕೆಯಾಯಿತು.


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ದೇವಾಲಯದ ಅಧಿಪತಿಯೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನಾದೀತೋ ಎಂದು ಕಳವಳಪಟ್ಟರು.


ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ -


ಈ ಎಲ್ಲಾ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಪ್ರಭುಗಳೂ ಲೇವಿಯರೂ ಯಾಜಕರೂ ಸಹಿಮಾಡಿ ಮುದ್ರೆಹಾಕಿದರು.


ಅವರು - ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವದಿಲ್ಲ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರಿಸಿ ಈ ಮಾತಿನಂತೆ ನಡೆಯುವದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಗೋತ್ರಪ್ರಧಾನರೂ ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಸಹೋದರರೂ ಒಟ್ಟಿಗೆ ಸಾವಿರದ ಏಳುನೂರ ಅರುವತ್ತು ಮಂದಿ.


ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು.


ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು; ದಾವೀದನು ಹೋರೆಷದಲ್ಲಿಯೇ ಇದ್ದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು.


ಹೀಗೆ ಯೆಹೋಶುವನು ಶೆಕೆವಿುನಲ್ಲಿ ಇಸ್ರಾಯೇಲ್ಯರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ನ್ಯಾಯವಿಧಿಗಳನ್ನು ನೇವಿುಸಿದನು.


ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.


ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಲ್ಪಟ್ಟು ಆರು ವರುಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಈ ಆರು ವರುಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.


ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.


ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು