Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:9 - ಕನ್ನಡ ಸತ್ಯವೇದವು J.V. (BSI)

9 ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್‍ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರಕೊಂಡು ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಜಕನಾದ ಯೆಹೋಯಾದವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಸಂಗತಿಗಳಿಗೆಲ್ಲ ಸೇನಾಧಿಪತಿಗಳು ವಿಧೇಯರಾಗಿದ್ದರು. ಪ್ರತಿಯೊಬ್ಬ ಸೇನಾಧಿಪತಿಯೂ ತನ್ನ ಕಾವಲುಗಾರರನ್ನು ಅಂದರೆ ಸಬ್ಬತ್‌ದಿನದಂದು ಕಾಯಲು ಬರಬೇಕಾಗಿದ್ದ ಮತ್ತು ಸಬ್ಬತ್‌ದಿನದಂದು ಕೆಲಸದಿಂದ ಹೋಗಬೇಕಾಗಿದ್ದ ಸಿಪಾಯಿಗಳನ್ನು ಕರೆದೊಯ್ದನು. ಅವರೆಲ್ಲರೂ ಯಾಜಕನಾದ ಯೆಹೋಯಾದಾವನ ಹತ್ತಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಶತಾಧಿಪತಿಗಳು ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಯೆಹೋಯಾದಾವನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:9
4 ತಿಳಿವುಗಳ ಹೋಲಿಕೆ  

ಲೇವಿಯರೂ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು [ಸಬ್ಬತ್ ದಿವಸದಲ್ಲಿ ಸೇವಾ ವಿಮುಕ್ತರಾದ] ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದದರಿಂದ ಪ್ರತಿಯೊಬ್ಬನು ಸಬ್ಬತ್‍ದಿವಸ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಕೂಡಿಸಿಕೊಂಡನು.


ಶೆಲೋಮೋತನೂ ಅವನ ಸಹೋದರರೂ ಪ್ರತಿಷ್ಠಿತವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರಬಂಧುಗಳು.


ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ


ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು