Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:15 - ಕನ್ನಡ ಸತ್ಯವೇದವು J.V. (BSI)

15 ಕೆಲಸಗಾರರಿಗೆ ಸಂಬಳ ಕೊಡುವ ಮೊಕ್ತೇಸರರು ನಂಬಿಗಸ್ತರಾಗಿದ್ದದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:15
10 ತಿಳಿವುಗಳ ಹೋಲಿಕೆ  

ಅವರು ನಂಬಿಗಸ್ತರಾಗಿರುವದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.


ಪ್ರಿಯನೇ, ಪರಿಚಯವಿಲ್ಲದವರಾದ ಸಹೋದರರಿಗೂ ನೀನು ಸತ್ಕಾರವನ್ನು ಮಾಡುವದರಲ್ಲಿ ನಂಬುವವನಿಗೆ ಯೋಗ್ಯನಾಗಿ ನಡೆಯುತ್ತೀ.


ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಇವನ ವಿಷಯವಾಗಿ ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ


ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.


ನಾವು ಪಾರುಪತ್ಯಮಾಡುವ ಈ ದ್ರವ್ಯಸಂಚಯದ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಿರಬಾರದು.


ಯೆಹೋವನ ಆಲಯದ ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿಬಂಗಾರದ ಪಾತ್ರೆ ಇವುಗಳನ್ನು ಮಾಡುವದಕ್ಕಾಗಿ ಉಪಯೋಗಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು