Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:17 - ಕನ್ನಡ ಸತ್ಯವೇದವು J.V. (BSI)

17 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:17
20 ತಿಳಿವುಗಳ ಹೋಲಿಕೆ  

ಆದರೆ ಆತನು ಯೆರೂಸಲೇವಿುಗೆ ಹೋಗುವವನಾದದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ; ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವದಾದರೆ


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.


ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ -


ಯೆಹೋವನು ಈ ಕಾಲದಲ್ಲಿ ಇಸ್ರಾಯೇಲ್ಯರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಯೊರ್ದನಿನ ಪೂರ್ವದಿಕ್ಕಿಗೂ


ಅರ್ನೊನ್‍ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್ ಬಾಷಾನ್ ಪ್ರಾಂತಗಳಲ್ಲಿ ವಾಸವಾಗಿದ್ದ ಗಾದ್ ರೂಬೇನ್ ಮನಸ್ಸೆ ಕುಲಗಳವರನ್ನೂ ಬೇರೆ ಎಲ್ಲಾ ಪ್ರಾಂತಗಳಲ್ಲಿರುವ ಇಸ್ರಾಯೇಲ್ಯರನ್ನೂ ಬಾಧಿಸಿದನು.


ಆದದರಿಂದ ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಇವರ ಕೈಯಲ್ಲಿದ್ದರು.


ಇದಲ್ಲದೆ ಆಹಾಜನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದಮಾಡಿಕೊಳ್ಳುವನು; ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣುಮಗಳನ್ನು ಕೊಡುವನು; ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲಿಸದು.


ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.


ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ದೋಷಪರಿಹಾರಕಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ವಿಧಿಯುಂಟು; ಹೇಗಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು;


ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಅದನ್ನು ಸಮರ್ಪಿಸುವ ಯಾಜಕನಿಗೆ ಆಗಬೇಕು.


ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು