Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:5 - ಕನ್ನಡ ಸತ್ಯವೇದವು J.V. (BSI)

5 ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:5
14 ತಿಳಿವುಗಳ ಹೋಲಿಕೆ  

ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ - ನೀವು ಯೆಹೂದದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಯೆಹೋವನ ಆಲಯವನ್ನು ವರುಷ ವರುಷ ಜೀರ್ಣೋದ್ಧಾರ ಮಾಡುವದಕ್ಕಾಗಿ ಎಲ್ಲಾ ಇಸ್ರಾಯೇಲ್ಯರಿಂದ ಹಣಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ ಎಂದು ಆಜ್ಞಾಪಿಸಿದನು.


ಇವರ ಸಂಬಳಕ್ಕಾಗಿಯೂ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಆಲಯದ ಜೀರ್ಣೋದ್ಧಾರದ ಬೇರೆ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸುವರು.


ಅವನು ತಿರುಗಿ ಬಿದ್ದದ್ದು ಹೇಗಂದರೆ - ಸೊಲೊಮೋನನು ವಿುಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲಸ್ಥಳವನ್ನು ಭದ್ರಪಡಿಸುತ್ತಿರುವಾಗ


ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು.


ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು


ಯಾಜಕರು ಅರಸನಾದ ಯೆಹೋವಾಷನ ಆಳಿಕೆಯ ಇಪ್ಪತ್ತಮೂರನೆಯ ವರುಷದವರೆಗೂ ದೇವಾಲಯವನ್ನು ಜೀರ್ಣೋದ್ಧಾರಮಾಡಿರಲಿಲ್ಲ.


ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -


ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲುಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ - ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಿ


ಇಸ್ರಾಯೇಲ್ ಗೋತ್ರ ಕುಟುಂಬಗಳ ಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಅರಸನ ಕೆಲಸದವರ ಮುಖ್ಯಸ್ಥರೂ ದೇವಾಲಯದ ಕೆಲಸಕ್ಕೋಸ್ಕರ ಸ್ವೇಚ್ಫೆಯಿಂದ


ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು