Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:6 - ಕನ್ನಡ ಸತ್ಯವೇದವು J.V. (BSI)

6 ಯಾಜಕರು ಅರಸನಾದ ಯೆಹೋವಾಷನ ಆಳಿಕೆಯ ಇಪ್ಪತ್ತಮೂರನೆಯ ವರುಷದವರೆಗೂ ದೇವಾಲಯವನ್ನು ಜೀರ್ಣೋದ್ಧಾರಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯಾಜಕರು ಸರಿಪಡಿಸಲಿಲ್ಲ. ಯೆಹೋವಾಷನು ರಾಜನಾದ ಇಪ್ಪತ್ತಮೂರನೆಯ ವರ್ಷದಲ್ಲಿ, ಯಾಜಕರಿನ್ನೂ ದೇವಾಲಯವನ್ನು ಸರಿಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಯಾಜಕರು ಅರಸನಾದ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:6
9 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು.


ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.


ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು.


ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ - ನೀವು ಯೆಹೂದದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಯೆಹೋವನ ಆಲಯವನ್ನು ವರುಷ ವರುಷ ಜೀರ್ಣೋದ್ಧಾರ ಮಾಡುವದಕ್ಕಾಗಿ ಎಲ್ಲಾ ಇಸ್ರಾಯೇಲ್ಯರಿಂದ ಹಣಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು