2 ಅರಸುಗಳು 12:9 - ಕನ್ನಡ ಸತ್ಯವೇದವು J.V. (BSI)9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತುಮಾಡಿ ಅದನ್ನು ಯೆಹೋವನ ಆಲಯದ ಬಾಗಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು, ಅದರ ಮುಚ್ಚಳದಲ್ಲಿ ತೂತುಮಾಡಿ, ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಬಲಗಡೆಯಲ್ಲಿ, ಬಲಿಪೀಠದ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಅದರ ಮುಚ್ಚಳದಲ್ಲಿ ಒಂದು ರಂಧ್ರವನ್ನು ಮಾಡಿದನು. ಅವನು ಅದನ್ನು ಬಲಿಪೀಠದ ಬಳಿಯಲ್ಲಿ ಯೆಹೋವ ದೇವರ ಆಲಯ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಿಲು ಕಾಯುವ ಯಾಜಕರು ಯೆಹೋವ ದೇವರ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿ ಹಾಕಿಸುತ್ತಿದ್ದರು. ಅಧ್ಯಾಯವನ್ನು ನೋಡಿ |