Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:1 - ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳಿಕೆಯ ಇಪ್ಪತ್ತಮೂರನೆಯ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ, ಯೇಹುವಿನ ಮಗ ಯೆಹೋವಾಹಾಜನು, ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹದಿನೇಳು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋವಾಹಾಜನು ಹದಿನೇಳು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಅಹಜ್ಯನ ಮಗ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ, ಯೇಹುವಿನ ಮಗ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾದನು. ಅವನು ಹದಿನೇಳು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:1
10 ತಿಳಿವುಗಳ ಹೋಲಿಕೆ  

ಯೆಹೋವಾಷನು ಅರಸನಾದಾಗ ಏಳು ವರುಷದವನಾಗಿದ್ದನು.


ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ


ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಒಂದು ವರುಷ ಆಳಿದನು. ಇಸ್ರಾಯೇಲ್ಯರ ಅರಸನಾದ ಒವ್ರಿುಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.


ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೇರನ ಮಗನಾದ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗಟ್ಟದ ದಾರಿಯಲ್ಲಿರುವ ವಿುಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಕುಟುಂಬಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಯೆಹೋವನು ಯೇಹುವಿಗೆ - ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದಿ; ಆದದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂದು ಹೇಳಿದನು.


ಯೆಹೋವಾಷನು ಯೇಹುವಿನ ಆಳಿಕೆಯ ಏಳನೆಯ ವರುಷದಲ್ಲಿ ಅರಸನಾಗಿ ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ಯೆಹೂದದ ಅರಸನಾದ ಯೆಹೋವಾಷನ ಆಳಿಕೆಯ ಮೂವತ್ತೇಳನೆಯ ವರುಷದಲ್ಲಿ ಯೆಹೋವಾಹಾಜನ ಮಗನಾದ ಯೋವಾಷನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರುಷ ಆಳಿದನು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು