Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:11 - ಕನ್ನಡ ಸತ್ಯವೇದವು J.V. (BSI)

11 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಇಸ್ರೇಲಿನ ರಾಜನಾದ ಯೋವಾಷನು ಮಾಡಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಮತ್ತೆ ಮಾಡುವುದನ್ನು ಅವನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಸಮಸ್ತ ಪಾಪಗಳನ್ನು ತೊರೆದುಬಿಡದೆ, ಅವುಗಳಲ್ಲಿ ಮುಂದುವರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:11
6 ತಿಳಿವುಗಳ ಹೋಲಿಕೆ  

ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.)


ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.


ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಯೆಹೂದದ ಅರಸನಾದ ಯೆಹೋವಾಷನ ಆಳಿಕೆಯ ಮೂವತ್ತೇಳನೆಯ ವರುಷದಲ್ಲಿ ಯೆಹೋವಾಹಾಜನ ಮಗನಾದ ಯೋವಾಷನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರುಷ ಆಳಿದನು.


ಇವನ ಉಳಿದ ಚರಿತ್ರೆಯೂ ಎಲ್ಲಾ ಶೂರ ಕೃತ್ಯಗಳೂ ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು