Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:17 - ಕನ್ನಡ ಸತ್ಯವೇದವು J.V. (BSI)

17 ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ ಎಂದನು. ಅವನು ತೆರೆದನು. ಅನಂತರ - ಬಾಣವನ್ನೆಸೆ ಎಂದು ಆಜ್ಞಾಪಿಸಿದನು. ಅವನು ಎಸೆಯಲು - ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲೀಷನು, “ಪೂರ್ವದಿಕ್ಕಿನ ಕಿಟಕಿಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು. ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:17
14 ತಿಳಿವುಗಳ ಹೋಲಿಕೆ  

ಒಂದು ವರುಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಅಫೇಕಕ್ಕೆ ಹೋದನು.


ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.


ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಅವರ ಮೇಲೆ ಬೀಳು ಅಂದನು.


ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು. ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳುಕೊಂಡರು.


ಇದಲ್ಲದೆ ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗಬೇಕು; ಇದರಿಂದಲೇ ಆ ಮಹತ್ಕಾರ್ಯಗಳನ್ನು ಮಾಡುವಿ ಅಂದನು.


ಯೆಹೋವನು ಅವನನ್ನು - ಅದೇನು ನಿನ್ನ ಕೈಯಲ್ಲಿರುವದು ಎಂದು ಕೇಳಿದನು. ಅವನು - ಇದು ಕೋಲು ಅಂದನು.


ಅಫೇಕದ ಅರಸನು 1, ಲಷ್ಷಾರೋನಿನ ಅರಸನು 1;


ಆಗ ಅವನಿಗೆ - ಬಿಲ್ಲನ್ನು ಹಿಡಿದುಕೋ ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು -


ಇದಲ್ಲದೆ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಬಾಣಗಳನ್ನು ತೆಗೆದುಕೋ ಎಂದು ಆಜ್ಞಾಪಿಸಿದಾಗ ಅವನು ತೆಗೆದುಕೊಳ್ಳಲು - ಇವುಗಳಿಂದ ನೆಲವನ್ನು ಹೊಡಿ ಅಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.


ಈ ಎರಡು ಸೈನ್ಯಗಳೂ ಏಳು ದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲ್ಯರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು