Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:4 - ಕನ್ನಡ ಸತ್ಯವೇದವು J.V. (BSI)

4 (ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಆತನು ಅವನ ಮೊರೆಯನ್ನು ಲಾಲಿಸಿ ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟ ಇಸ್ರಾಯೇಲ್ಯರ ಮೇಲೆ ಕಟಾಕ್ಷವಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:4
22 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ -


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.


ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು;


ನನ್ನ ಕಡೆಗೆ ಮುಖ ತಿರುಗಿಸದೆ ಬೆನ್ನುಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ - ಎದ್ದು ನಮ್ಮನ್ನುದ್ಧರಿಸು ಎಂದು ಮೊರೆಯಿಡುವರು.


ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳಿಕೆಯಲ್ಲೆಲ್ಲಾ ಇಸ್ರಾಯೇಲ್ಯರನ್ನು ಪೀಡಿಸುತ್ತಿದ್ದನು.


ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ -


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್ ಇಸಾಕ್ ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಸಿ ಅವರಿಗೆ ದಯೆತೋರಿಸಿದನು; ಕರುಳು ಮರುಗಿದವನಾಗಿ ಅವರಿಗೆ ಪ್ರಸನ್ನನಾದನು.


ನಾವು ಈ ಕಾರಣದಿಂದ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು