Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:6 - ಕನ್ನಡ ಸತ್ಯವೇದವು J.V. (BSI)

6 ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವನ್ನು ನೆಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:6
15 ತಿಳಿವುಗಳ ಹೋಲಿಕೆ  

ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.


ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು.


ತನ್ನ ತಂದೆಯು ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಇವನು ಸೇವಿಸಲಿಲ್ಲ.


ಆದದರಿಂದ ನೀವು ಹೀಗೆ ಮಾಡಬೇಕು - ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲಿನ ಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು