Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:9 - ಕನ್ನಡ ಸತ್ಯವೇದವು J.V. (BSI)

9 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರಿಯದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋವಾಷನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವಾಹಾಜನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೆಹೋವಾಹಾಜನ ನಂತರ ಅವನ ಮಗನಾದ ಯೋವಾಷನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವಾಹಾಜನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೋವಾಷನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:9
6 ತಿಳಿವುಗಳ ಹೋಲಿಕೆ  

ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಸಿದನು.


ಇವನು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.


ಯೆಹೂದದ ಅರಸನಾದ ಯೆಹೋವಾಷನ ಆಳಿಕೆಯ ಮೂವತ್ತೇಳನೆಯ ವರುಷದಲ್ಲಿ ಯೆಹೋವಾಹಾಜನ ಮಗನಾದ ಯೋವಾಷನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರುಷ ಆಳಿದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನು ಅರಸನಾದನು. ಯೇಹುವು ಸಮಾರ್ಯಪಟ್ಟಣದಲ್ಲಿದ್ದುಕೊಂಡು ಇಸ್ರಾಯೇಲ್ಯರನ್ನು ಆಳಿದ್ದು ಇಪ್ಪತ್ತೆಂಟು ವರುಷ.


ಇಸ್ರಾಯೇಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವದರಿಂದ ಇವನೊಬ್ಬನೇ ಸಮಾಧಿಹೊಂದುವನು.


ಯೆಹೋವಾಹಾಜನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು