2 ಅರಸುಗಳು 14:13 - ಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡುಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲರ ಅರಸ ಯೋವಾಷನು, ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮತ್ಯನನ್ನು, ಬೇತ್ಷೆಮೆಷಿನಲ್ಲಿ ಹಿಡಿದು, ಅವನನ್ನು ಜೆರುಸಲೇಮಿಗೆ ಕರೆದುಕೊಂಡುಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿ |