Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:16 - ಕನ್ನಡ ಸತ್ಯವೇದವು J.V. (BSI)

16 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ಯರ ರಾಜಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯಾರೊಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ಸಮಾರಿಯದೊಳಗೆ ಇಸ್ರಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯಾರೊಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋವಾಷನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸುಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಯಾರೊಬ್ಬಾಮನು ಅವನ ಬದಲಿಗೆ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:16
13 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಇವನು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಯೋವಾಷನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲ್‍ರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇಸ್ರಾಯೇಲ್ಯರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರುಷ ಬದುಕಿದನು.


ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.


ಇವನ ಉಳಿದ ಚರಿತ್ರೆಯೂ ಎಲ್ಲಾ ಶೂರ ಕೃತ್ಯಗಳೂ ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳಿಕೆಯ ಹದಿನೈದನೆಯ ವರುಷದಲ್ಲಿ ಇಸ್ರಾಯೇಲ್ಯರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.


ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು