Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:24 - ಕನ್ನಡ ಸತ್ಯವೇದವು J.V. (BSI)

24 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:24
17 ತಿಳಿವುಗಳ ಹೋಲಿಕೆ  

ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.)


ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


ಹೀಗೆ ಅವರು ತಮ್ಮ ದಿವ್ಯಮಹಿಮೆಯನ್ನು ಬಿಟ್ಟು ಹುಲ್ಲುತಿನ್ನುವ ಎತ್ತಿನ ಜಡಮೂರ್ತಿಯನ್ನು ಹಿಡಿದುಕೊಂಡರು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳಿಕೆಯ ಹದಿನೈದನೆಯ ವರುಷದಲ್ಲಿ ಇಸ್ರಾಯೇಲ್ಯರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.


ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.


ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.


ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆಮಾಡಬೇಡ; ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ ಎಂದು ಹೇಳಲು


ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು