Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:25 - ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:25
16 ತಿಳಿವುಗಳ ಹೋಲಿಕೆ  

ಅದಲ್ಲದೆ ಅರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರ ಮೊದಲುಗೊಂಡು ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣ ಸಮುದ್ರದವರೆಗೆ ಯೊರ್ದನ್ ಹೊಳೆಯು ಅವರ [ಪಶ್ಚಿಮ] ಮೇರೆ.


ಯೆಹೋವನು ಅವಿುತ್ತೈಯ ಮಗನಾದ ಯೋನನಿಗೆ -


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದರಿದು ಗತ್‍ಹೇಫೆರ್, ಎತ್‍ಕಾಚೀನ್ ಇವುಗಳ ಮೇಲೆ ನೇಯದ ಮಗ್ಗುಲಲ್ಲಿರುವ ರಿಮ್ಮೋನಿಗೆ ಹೋಗುತ್ತದೆ.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.


ಯೆಹೋವಾಹಾಜನ ಮಗನಾದ ಯೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರಿಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.


ಯೆಹೋವನು ಈ ಕಾಲದಲ್ಲಿ ಇಸ್ರಾಯೇಲ್ಯರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಯೊರ್ದನಿನ ಪೂರ್ವದಿಕ್ಕಿಗೂ


ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು