2 ಅರಸುಗಳು 14:9 - ಕನ್ನಡ ಸತ್ಯವೇದವು J.V. (BSI)9 ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಇಸ್ರಯೇಲರ ಅರಸನಾದ ಯೋವಾಷ ಜುದೇಯದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು,’ ಎಂದು ಹೇಳಿಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗ ಅಲ್ಲಿಂದ ಹಾದುಹೋಗುತ್ತಿರುವಾಗ ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು. ಅಧ್ಯಾಯವನ್ನು ನೋಡಿ |