2 ಅರಸುಗಳು 15:25 - ಕನ್ನಡ ಸತ್ಯವೇದವು J.V. (BSI)25 ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರೋಧವಾಗಿ ಒಳಸಂಚುಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು. ಅಧ್ಯಾಯವನ್ನು ನೋಡಿ |