Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:29 - ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:29
51 ತಿಳಿವುಗಳ ಹೋಲಿಕೆ  

ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.


ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರೋಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.


ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಸೆರೆಯೊಯ್ದನು.


ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.


ಕೆದೆಷ್, ಎದ್ರೈ, ಏನ್‍ಹಾಚೋರ್, ಇರೋನ್, ವಿುಗ್ದಲೇಲ್, ಹೊರೇಮ್, ಬೇತನಾತ್, ಬೇತ್‍ಷೆಮೆಷ್ ಇವೇ ಮೊದಲಾದ ಹತ್ತೊಂಭತ್ತು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳೂ ಅವುಗಳ ಗ್ರಾಮಗಳೂ


ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು, ಶಿಮ್ರೋನಿನ ಅರಸನು, ಅಕ್ಷಾಫಿನ ಅರಸನು ಇವರನ್ನೂ


ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.


ಯೆಹೋವನು ಇಂತೆನ್ನುತ್ತಾನೆ - ದಮಸ್ಕವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಸುಟ್ಟು ಹೋಗಿವೆ; ನಿಮ್ಮ ಭೂವಿುಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ; ಅನ್ಯದೇಶಗಳು ನಾಶನವಾದಂತೆಯೇ ನಿಮ್ಮ ಭೂವಿುಯೂ ಹಾಳಾಯಿತು.


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.


ಅದರ ಉತ್ತರದಿಕ್ಕಿನ ಮೇರೆಯು ವಿುಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.


ಮಾದೋನಿನ ಅರಸನು 1; ಹಾಚೋರಿನ ಅರಸನು 1;


ಯೆಹೋಶುವನು ಸುಟ್ಟ ಹಾಚೋರ್ ಹೊರತು ಇಸ್ರಾಯೇಲ್ಯರು ದಿನ್ನೆಯ ಮೇಲಣ ಬೇರೆ ಯಾವ ಪಟ್ಟಣವನ್ನೂ ಸುಡಲಿಲ್ಲ.


ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಲ್ಲಿ ಶ್ರೇಷ್ಠವಾಗಿತ್ತು.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ


ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು


ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ಒಕ್ಕಲಾಗುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕನಾದ ಊರೀಯನಿಗೆ ಕಳುಹಿಸಿದನು.


ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.


ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ಯೆಹೋವನೇ, ಅಶ್ಶೂರದ ಅರಸರು ಸಕಲಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳುಮಾಡಿ


ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್,


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲ್ಯರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಅವನು ನಾಚಿಕೊಳ್ಳುವ ತನಕ ಸ್ಥಿರದೃಷ್ಟಿಯಿಂದ ಅವನನ್ನು ನೋಡಿ ಅಳತೊಡಗಿದನು.


ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವದಕ್ಕಾಗಿ ಇಸ್ರಾಯೇಲ್ಯರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ತೆಗೆದುಕೊಂಡನು. ಆ ಹಣವು ಸಿಕ್ಕಿದನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.


ಆರನೆಯ ವರುಷದಲ್ಲಿ ಸ್ವಾಧೀನವಾಗಲು ಇಸ್ರಾಯೇಲ್ಯರನ್ನು ಸೆರೆಹಿಡಿದು ಹಲಹು, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಉಳಿಯುವಿಯೋ?


ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.


ಆದಕಾರಣ ನಾನು ಅವಳನ್ನು ಅವಳ ವಿುಂಡರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು