Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:30 - ಕನ್ನಡ ಸತ್ಯವೇದವು J.V. (BSI)

30 ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:30
15 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಆಹಾಜನ ಆಳಿಕೆಯ ಹನ್ನೆರಡನೆಯ ವರುಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರುಷ ಆಳಿದನು.


ನಿಮ್ಮ ದುಷ್ಟತನವು ಬಹಳವಾಗಿರುವದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವದು; ಬೆಳಗಾಗುವದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.


ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಚಕ್ಕೆಗೆ ಸಮಾನನಾಗಿದ್ದಾನೆ.


ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ; ರಾಜನಾದರೋ ನಮಗಾಗಿ ಏನು ಮಾಡಿಯಾನು ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.


ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ಉಪೇಕ್ಷಿಸಿ ರೆಚೀನನನ್ನೂ ರೆಮಲ್ಯನ ಮಗನನ್ನೂ ನಂಬಿ ಮೆರೆದದ್ದರಿಂದ


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ರೆಮಲ್ಯನ ಮಗನಾದ ಪೆಕಹನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಯೆಹೂದರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರೋಧವಾಗಿ ಒಳಸಂಚುಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಪೆಕಹನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು