Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:37 - ಕನ್ನಡ ಸತ್ಯವೇದವು J.V. (BSI)

37 ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಸರ್ವೇಶ್ವರ ಆ ಕಾಲದಲ್ಲಿ ಸಿರಿಯಾದ ಅರಸ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದ್ಯರಿಗೆ ವಿರುದ್ಧ ಕಳುಹಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆ ಕಾಲದಲ್ಲಿ, ಅರಾಮ್ಯರ ರಾಜನಾದ ರೆಚೀನನನ್ನು ಮತ್ತು ರೆಮಲ್ಯನ ಮಗನಾದ ಪೆಕಹನನ್ನು ಯೆಹೂದದ ವಿರುದ್ಧ ಹೋರಾಡಲು ಯೆಹೋವನು ಕಳುಹಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆ ದಿವಸಗಳಲ್ಲಿ ಯೆಹೋವ ದೇವರು ಅರಾಮಿನ ಅರಸನಾದ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದದ ವಿರೋಧವಾಗಿ ಕಳುಹಿಸಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:37
18 ತಿಳಿವುಗಳ ಹೋಲಿಕೆ  

ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಪೆಕಹ ಎಂಬವರು ಯೆರೂಸಲೇವಿುನ ಮೇಲೆ ದಂಡೆತ್ತಿ ಬಂದರು. (ಅದನ್ನು ಜಯಿಸುವದಕ್ಕೆ ಆಗಲಿಲ್ಲ.)


ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಯೆರೂಸಲೇವಿುಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವದು ಅವರಿಂದ ಆಗಲಿಲ್ಲ.


ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಅರಾವಿುಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನನಷ್ಟೆ; ಎಫ್ರಾಯೀವಿುಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನೇ ತಾನೆ.


ಆತನು ಅವರ ಮೇಲೆ ತನ್ನ ಕೋಪ ರೌದ್ರಗಳನ್ನೂ ಉಗ್ರಹಿಂಸೆಗಳನ್ನೂ ಸಂಹಾರದೂತಗಣವನ್ನೋ ಎಂಬಂತೆ ಕಳುಹಿಸಿದನು.


ರೆಮಲ್ಯನ ಮಗನಾದ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಯೆಹೋವನು ಈ ಕಾಲದಲ್ಲಿ ಇಸ್ರಾಯೇಲ್ಯರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಯೊರ್ದನಿನ ಪೂರ್ವದಿಕ್ಕಿಗೂ


ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಯೋತಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೋತಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬಶ್ಮಶಾನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.


ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರುಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು