Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:1 - ಕನ್ನಡ ಸತ್ಯವೇದವು J.V. (BSI)

1 ರೆಮಲ್ಯನ ಮಗನಾದ ಪೆಕಹನ ಆಳಿಕೆಯ ಹದಿನೇಳನೆಯ ವರುಷದಲ್ಲಿ ಯೆಹೂದರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಜುದೇಯದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾಮನ ಮಗನಾದ ಅಹಾಜನು ಯೆಹೂದದ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗ ಆಹಾಜನು ಆಳಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:1
12 ತಿಳಿವುಗಳ ಹೋಲಿಕೆ  

ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೂದದ ಅರಸನಾದ ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇವಿುನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕಂಡುಬಂದ ಯೆಹೋವನ ವಾಕ್ಯ.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಪೆಕಹ ಎಂಬವರು ಯೆರೂಸಲೇವಿುನ ಮೇಲೆ ದಂಡೆತ್ತಿ ಬಂದರು. (ಅದನ್ನು ಜಯಿಸುವದಕ್ಕೆ ಆಗಲಿಲ್ಲ.)


ಯೋತಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬಶ್ಮಶಾನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.


ಯೆಹೂದದ ಅರಸನಾದ ಆಹಾಜನ ಆಳಿಕೆಯ ಹನ್ನೆರಡನೆಯ ವರುಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರುಷ ಆಳಿದನು.


ಇವನ ಮಗನು ಆಹಾಜ್; ಇವನ ಮಗನು ಹಿಜ್ಕೀಯ;


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು - ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲಿವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು


ಮತ್ತೆ ಯೆಹೋವನು ಆಹಾಜನಿಗೆ - ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳಿಕೋ; ಅದು ಪಾತಾಳದಷ್ಟು ಆಳದಲ್ಲಿದ್ದರೂ ಮೇಲಣ ಲೋಕದಷ್ಟು ಎತ್ತರದಲ್ಲಿದ್ದರೂ ಕೇಳಿಕೋ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು