Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:10 - ಕನ್ನಡ ಸತ್ಯವೇದವು J.V. (BSI)

10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅರಸನಾದ ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ, ದಮಸ್ಕದಲ್ಲಿ ಒಂದು ಬಲಿಪೀಠವನ್ನು ಕಂಡನು. ಅರಸನಾದ ಆಹಾಜನು ಆ ಬಲಿಪೀಠದ ರೂಪವನ್ನೂ, ಅದರ ಎಲ್ಲಾ ಕೈಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:10
22 ತಿಳಿವುಗಳ ಹೋಲಿಕೆ  

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


[ನೀನು ಹೀಗೆ ಬರೆದದ್ದಕ್ಕೆ] ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು ಎಂದು ಹೇಳಿದನು.


ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿ ತೋರಿಸುವದು ವ್ಯರ್ಥ ಎಂಬದೇ.


ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ತಾವು ನಡಿಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ ನೀನು ದೇವಸ್ಥಾನದ ರೂಪವನ್ನೂ ವ್ಯವಸ್ಥೆಯನ್ನೂ ಗಮನಾಗಮನ ನಿಯಮಗಳನ್ನೂ ಸಕಲ ರಚನಾವಿಧಾನಗಳನ್ನೂ ಸಮಸ್ತ ವಿಧಿಗಳನ್ನೂ ಸರ್ವನಿರ್ಮಾಣರೀತಿಗಳನ್ನೂ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ತಿಳಿಸಿ ಅವರು ಅದರ ಪೂರ್ಣಕ್ರಮವನ್ನೂ ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ನನ್ನ ಹೊಸ್ತಲುನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವದರಿಂದಲೂ ಇನ್ನು ನನ್ನ ಪವಿತ್ರನಾಮವನ್ನು ಹೊಲೆಗೆಡಿಸರು; ಆಹಾ, ತಾವು ನಡಿಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಯೆಹೋವನು ಹೀಗೆ ಹೇಳುತ್ತಾನೆ - ಜನಾಂಗಗಳ ಆಚರಣೆಯನ್ನು ಅಭ್ಯಾಸಿಸದಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಪದ್ಧತಿಗಳನ್ನು ಅನುಸರಿಸಬಾರದು ನೋಡಿರಿ. ನೀವು - ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರು? ಹಾಗೆಯೇ ನಾವೂ ಸೇವಿಸುವೆವು ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ವೇದಿಯನ್ನು ಮಾಡಿಸಿಟ್ಟಿದ್ದನು.


ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ ಯೆರೂಸಲೇವಿುನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ.


ಅವರು ಮುಂದೆ ನಮಗಾಗಲಿ ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದರೆ ನಾವು ಅವರಿಗೆ - ಈ ಯೆಹೋವವೇದಿಯ ಮಾದರಿಯನ್ನು ನೋಡಿರಿ; ನಮ್ಮ ಪಿತೃಗಳು ಇದನ್ನು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯದಲ್ಲಿ ಸಾಕ್ಷಿಯಾಗಿರುತ್ತದೆಯಷ್ಟೆ ಎಂದು ಹೇಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು