Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:14 - ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:14
12 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.


ಯೆಹೋವನು ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಲಿನ ಮುಂದೆ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ದೇವದರ್ಶನದ ಗುಡಾರದ ಬಾಗಲಿನ ಮುಂದುಗಡೆಯಲ್ಲಿ ಯಜ್ಞವೇದಿಯನ್ನು ಇಡಬೇಕು.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಆ ವೇದಿಗಾಗಿಯೇ ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ವೇದಿಯನ್ನು ಮಾಡಿಸಿಟ್ಟಿದ್ದನು.


ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು; ಅದರ ಎತ್ತರ ಮೂರು ಮೊಳವಿರಬೇಕು.


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು; ಅವು ಯಜ್ಞವೇದಿಗೆ ಏಕವಾಗಿರಬೇಕು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿವಿುಕಿಸಿದನು.


ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.


ಅರಸನಾದ ಆಹಾಜನು ತನ್ನ ಆಳಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟ ಪಾತ್ರೆಗಳನ್ನು ತಿರಿಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ ಅಂದರು.


ನನ್ನ ಹೊಸ್ತಲುನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವದರಿಂದಲೂ ಇನ್ನು ನನ್ನ ಪವಿತ್ರನಾಮವನ್ನು ಹೊಲೆಗೆಡಿಸರು; ಆಹಾ, ತಾವು ನಡಿಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು