Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:17 - ಕನ್ನಡ ಸತ್ಯವೇದವು J.V. (BSI)

17 ಅರಸನಾದ ಆಹಾಜನು ಅಶ್ಶೂರದ ಅರಸನ ನಿವಿುತ್ತವಾಗಿ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅರಸನಾದ ಆಹಾಜನು ಅಸ್ಸೀರಿಯದ ಅರಸನ ನಿಮಿತ್ತ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ನೀರಿನ ತೊಟ್ಟಿಗಳನ್ನು ತೆಗೆದಿಟ್ಟನು; ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಿನಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನಾದ ಆಹಾಜನು ಪೀಠದ ಅಂಚುಗಳನ್ನು ಕೊಯ್ದು, ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ಅದರ ಮೇಲಿನಿಂದ ಇಳಿಸಿ, ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:17
8 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.


ಅರಸನಾದ ಆಹಾಜನು ತನ್ನ ಆಳಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟ ಪಾತ್ರೆಗಳನ್ನು ತಿರಿಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ ಅಂದರು.


ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.


ಯಾಜಕನಾದ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್‍ದಿನದ ಆರಾಧನೆಗಾಗಿ ರಾಜರಿಗೆ ಕಟ್ಟಲ್ಪಟ್ಟಿದ್ದ ಮಂಟಪವನ್ನೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಲನ್ನೂ ಬದಲಾಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು