Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:3 - ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಹೇಸಿಗೆ ಕೆಲಸಗಳನ್ನು ಅನುಸರಿಸಿ ತನ್ನ ಮಗನನ್ನು ಆಹುತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದನು. ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:3
32 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಯೆಹೂದ್ಯರ ಅರಸನಾದ ಮನಸ್ಸೆಯು ಮುಂಚೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡಿಸಿದದರಿಂದಲೂ ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದದರಿಂದಲೂ


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.


ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಕರ್ತನಾದ ಯೆಹೋವನ ನುಡಿ.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ ಕೇವಲ ದುರವಸ್ಥೆಗೆ ತಂದೆನು.


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡಿಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡಿ.


ನಿನ್ನ ಸೂಳೆತನವು ಅಲ್ಪಕಾರ್ಯವೆಂದು ಭಾವಿಸಿದಿಯೋ? ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?


ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.


ಅವರೊಡನೆ ಕೂಡಿಕೊಂಡು ಅವರ ದುರಾಚಾರಗಳನ್ನು ಕಲಿತುಕೊಂಡರು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ತನ್ನ ತಾಯಿಯ ದುರ್ಬೋಧೆಯನ್ನು ಆಲೈಸಿ ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನನುಸರಿಸುತ್ತಿರುವ ದೇವದಾಸ ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ನಡಿಸುವವರಾದರು.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್‍ರಾಜರ ದುರಾಚಾರಗಳನ್ನು ಅನುಸರಿಸಿದರು;


ಯೆಹೂದ್ಯರು ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲ್ಯರ ಪದ್ಧತಿಯನ್ನು ಅನುಸರಿಸಿದದರಿಂದ


ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಆದರೆ ಇಸ್ರಾಯೇಲ್ಯರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು