Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:11
15 ತಿಳಿವುಗಳ ಹೋಲಿಕೆ  

ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಅನ್ಯದೇವತೆಗಳಿಗೆ ಧೂಪಹಾಕುವದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಯೆಹೋವನನ್ನು ರೇಗಿಸಿದನು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು


ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲುಕಂಬ, ಅಶೇರವಿಗ್ರಹ ಸ್ತಂಭ ಇವುಗಳನ್ನು ನಿಲ್ಲಿಸಿದರು;


ಯೆಹೋವನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು;


ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಹೇಸಿಗೆ ಕೆಲಸಗಳನ್ನು ಅನುಸರಿಸಲೇಬಾರದು.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು


ಕಾಡಿನಲ್ಲಿ ದ್ರಾಕ್ಷೆಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ಕಂಡೆನು; ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್‍ದೇವತೆಯ ಭಕ್ತರಾಗಿ ದೀಕ್ಷೆಗೊಂಡು ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು