Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:13
47 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


(ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)


ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಯನ್ನು ತೆರೆದು ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.


ಅವಳು ಇವುಗಳನ್ನೆಲ್ಲಾ ನಡಿಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತುಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.


[ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯ ದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡಿಸಿದ್ದೇನೆ.


ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು.


ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿಸಿದ್ದೇನಂದರೆ -


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನನ್ನು ರೇಗಿಸಿ ಆತನ ದೃಷ್ಟಿಯಲ್ಲಿ ದ್ರೋಹಿಯಾದದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದದರಿಂದಲೂ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೂ ಅವನ ಕುಟುಂಬಕ್ಕೂ ದುರ್ಗತಿಯನ್ನು ಮುಂತಿಳಿಸಿದನು.


ಇದಲ್ಲದೆ ಇವನು ಯೆಹೋವನನ್ನೇ ಹೊಂದಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ ಆತನು ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಯನ್ನು ಕೈಕೊಂಡನು.


ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ -


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು