2 ಅರಸುಗಳು 17:27 - ಕನ್ನಡ ಸತ್ಯವೇದವು J.V. (BSI)27 ಆಗ ಅವನು ಅವರಿಗೆ - ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ಅವನು, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅವರಿಗೆ ಕಲಿಸಲಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ಅಶ್ಶೂರದ ರಾಜನು, “ನೀವು ಸಮಾರ್ಯದಿಂದ ಕೆಲವು ಯಾಜಕರನ್ನು ಕರೆದೊಯ್ದಿರುವಿರಿ. ನಾನು ಸಮಾರ್ಯದಿಂದ ಸೆರೆಹಿಡಿದು ತಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿ. ಆ ಯಾಜಕನು ಹೋಗಿ ಅಲ್ಲಿಯೇ ನೆಲೆಸಲಿ. ನಂತರ ಆ ಯಾಜಕನ ಆ ದೇಶದ ದೇವರ ಕಟ್ಟಳೆಗಳನ್ನು ಜನರಿಗೆ ಬೋಧಿಸಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |