Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:3 - ಕನ್ನಡ ಸತ್ಯವೇದವು J.V. (BSI)

3 ಅಶ್ಶೂರದ ಅರಸನಾದ ಶಲ್ಮನೆಸೆರನು ಇವನಿಗೆ ವಿರೋಧವಾಗಿ ಬಂದಾಗ ಇವನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:3
23 ತಿಳಿವುಗಳ ಹೋಲಿಕೆ  

ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ ಅವರನ್ನು ನೆಲಕ್ಕೆ ಹಾಕಿಸಿ ಹಗ್ಗದಿಂದ ಅಳತೆ ಮಾಡಿಸಿ ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲು ಉಳಿಸಿದನು. ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಇವನು ತನ್ನ ಪೂರ್ವಿಕರಾದ ಇಸ್ರಾಯೇಲ್ಯರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ಕೆಲವು ವರುಷಗಳಾದನಂತರ ಇವನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆ ಹೋದದರಿಂದಲೂ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ಒಹೊಲಳು ನನ್ನ ಹೆಂಡತಿಯಾಗಿದ್ದರೂ ಸೂಳೆಯಾಗಿ ನಡೆದು ತನ್ನ ವಿುಂಡರನ್ನು ಅಂದರೆ


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವದಕ್ಕಾಗಿ ಇಸ್ರಾಯೇಲ್ಯರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ತೆಗೆದುಕೊಂಡನು. ಆ ಹಣವು ಸಿಕ್ಕಿದನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಶ್ಶೂರದ ಅರಸನಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರನಾದನು.


ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ಆ ದಿನದಲ್ಲಿ ಯಾಕೋಬಿನ ಮಾಂಸದ ಕೊಬ್ಬು ಕರಗಿ ಅದರ ಮಹಿಮೆಯು ಕ್ಷೀಣವಾಗುವದು.


ಅದು ಜನಾಂಗಗಳೊಳಗೆ ವಿುಂಡರನ್ನು ಸಂಪಾದಿಸಿದರೂ ಅದನ್ನು ನಾನು ಈಗ ಸೆರೆಕೂಡುವೆನು; ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು